No Result
View All Result
ಪೋಕ್ಸೋ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಜಾಮೀನು ನೀಡಿರುವ ಬಗ್ಗೆ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಮತ್ತು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪ ಯಾರೋ ನಾಣಿ, ವೆಂಕ, ಶೀನ (Tom, Dick, Harry) ಅಲ್ಲ ಎಂದು ಹೇಳಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಯಡಿಯೂರಪ್ಪಗೆ ನ್ಯಾಯಮೂರ್ತಿಗಳು ನಿರೀಕ್ಷಣಾ ಜಾಮೀನು ನೀಡಿದ್ದಾರೆ.
ಅಪಹರಣ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣಗೆ ಜಾಮೀನು ನೀಡಲಾಗಿದೆ.
ಅರವಿಂದ್ ಕೇಜ್ರಿವಾಲ್, ಹೇಮಂತ್ ಸೋರೆನ್ ಅವರನ್ನು ಯಾರೋ ನಾಣಿ, ವೆಂಕ, ಶೀನ (Tom, Dick, Harry) ಎಂದು ಪರಿಗಣಿಸಲಾಗಿದೆ.
ವಿಚಿತ್ರ
ಎಂದು ಮಾಜಿ ಕೇಂದ್ರ ಕಾನೂನು ಸಚಿವರೂ ಆಗಿರುವ ಕಪಿಲ್ ಸಿಬಲ್ ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆಯೇ ವ್ಯಂಗ್ಯವಾಡಿದ್ದಾರೆ.

ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜೂನ್ 20ರಂದು ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ತಿಹಾರ್ ಜೈಲಿನಿಂದ ಬಿಡುಗಡೆಗೂ ಮೊದಲೇ ಮರು ದಿನ ಅಂದರೆ ನಿನ್ನೆ ಜೂನ್ 21ರಂದು ದೆಹಲಿ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೇಜ್ರಿವಾಲ್ಗೆ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಿದ್ದರು. ಈ ಮೂಲಕ ಕೇಜ್ರಿವಾಲ್ ಬಿಡುಗಡೆ ಆಗಲಿಲ್ಲ.
ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ಜಾಮೀನು ನೀಡಿದ ಬಳಿಕ ಜೂನ್ 2ರಂದು ತಿಹಾರ್ ಜೈಲಿನಲ್ಲಿ ಶರಣಾಗಿದ್ದರು.
ಜನವರಿ 31ರಂದು ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೋರೇನ್ ಅವರನ್ನು ಬಂಧಿಸಿತ್ತು. ಹೇಮಂತ್ ಸೋರೇನ್ ಅವರಿಗೆ ಸುಪ್ರೀಂಕೋರ್ಟ್ ಪೀಠ ಕೂಡಾ ಮಧ್ಯಂತರ ಜಾಮೀನು ನಿರಾಕರಿಸಿದೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾರ್ಚ್ 15ರಂದು ಬೆಂಗಳೂರಿನಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೊಟ್ಟ ಪ್ರಕರಣ ದಾಖಲಾಗಿತ್ತು.
ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಗಳಾಗಿದ್ದವರು, ಅವರು ಯಾರೋ ಯಂಕ, ಶೀನ, ನಾಣಿಯಲ್ಲ ((Tom, Dick, Harry), ಈ ಪ್ರಕರಣದಲ್ಲಿ ಅವರು ದೇಶ ಬಿಟ್ಟು ಓಡಿಹೋಗುತ್ತಾರೆಯೇ..? ಎಂದು ಹೇಳಿ ನಿರೀಕ್ಷಣಾ ಜಾಮೀನು ನೀಡಿತ್ತು.
ಮೇ 20ರಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಹೆಚ್ ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
No Result
View All Result
error: Content is protected !!