ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಇವತ್ತಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಅಂದರೆ ಕರ್ನಾಟಕದಲ್ಲಿ ಒಟ್ಟು 53 ದಿನ ಚುನಾವಣಾ ಪ್ರಕ್ರಿಯೆ ನಡೆಯಲಿದೆ.
ಜೂನ್ 4ರಂದು ಪ್ರಕಟವಾಗಲಿರುವ ಫಲಿತಾಂಶ ದಿನ ಸೇರಿ ಒಟ್ಟು 54 ದಿನ ಚುನಾವಣಾ ಪ್ರಕ್ರಿಯೆ ನಡೆಯಲಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಗಿದ ಬಳಿಕ ಫಲಿತಾಂಶಕ್ಕಾಗಿ ಕರ್ನಾಟಕದ ಜನತೆ ಬರೋಬ್ಬರೀ 28 ದಿನ ಕಾಯಬೇಕು.
ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ನಡೆಯಲಿರುವ ಮೊದಲ ಹಂತದ ಮತದಾನಕ್ಕೂ ಎರಡನೇ ಹಂತದ ಮತದಾನಕ್ಕೂ ಇರುವ ಅಂತರ 12 ದಿನಗಳು.