ಬೆಂಗಳೂರು: ರಾಜ್ಯದ ಕಲಾವಳಿ ಸೇರಿದಂತೆ 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ನ.17 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,
ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.