No Result
View All Result
ಲೋಕಸಭಾ ಚುನಾವಣೆಯ ಫಲಿತಾಂಶದ ಕಾರಣದಿಂದ ಕರ್ನಾಟಕದಲ್ಲಿ ಶೀಘ್ರವೇ ಉಪ ಚುನಾವಣೆ ನಡೆಯಲಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಕಾರಣ ಮಾಜಿ ಮುಖ್ಯಮಂತ್ರಿಯೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.
ಹೀಗಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
2018ರಲ್ಲೂ ಕುಮಾರಸ್ವಾಮಿ ಅವರ ಕಾರಣದಿಂದ ಉಪ ಚುನಾವಣೆ ನಡೆದಿತ್ತು. ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರದಿಂದಲೂ ಗೆದ್ದಿದ್ದ ಕುಮಾರಸ್ವಾಮಿ ವಿಧಾನಸಭಾ ಫಲಿತಾಂಶ ಬಳಿಕ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ನಡೆದಿದ್ದ ಉಪ ಚುನಾವಣೆಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೈತ್ರಿ ಬೆಂಬಲದಿಂದ ಗೆದ್ದಿದ್ದರು.
2008ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದ ಕುಮಾರಸ್ವಾಮಿ ಅವರು 2009ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
ಹೀಗಾಗಿ 2009ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಉಪ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಕೆ ರಾಜು ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
ಆದರೆ 2013ರಲ್ಲಿ ಮತ್ತೆ ರಾಮನಗರದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕುಮಾರಸ್ವಾಮಿ ಅವರು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ 2013ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ಆ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿ ಸೋತರು. ಮೊದಲ ಬಾರಿಗೆ ಲೋಕಸಭಾ ಚುನಾವಣೆ ಎದುರಿಸಿದ್ದ ಡಿ ಕೆ ಸುರೇಶ್ ಗೆದ್ದು ಮೊದಲ ಬಾರಿಗೆ ಸಂಸದರಾದರು.
ನಿಯಮಗಳ ಪ್ರಕಾರ ಸಂಸದರಾಗಿ ಆಯ್ಕೆಯಾದ ಶಾಸಕರು ಫಲಿತಾಂಶ ಅಧಿಕೃತವಾಗಿ ಪ್ರಕಟವಾದ 14 ದಿನಗಳ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ಬೇಕು. ಇಲ್ಲವಾದರೆ ಅವರು ತಮ್ಮ ಸಂಸದ ಸ್ಥಾನ ಕಳೆದುಕೊಳ್ತಾರೆ, ಆದರೆ ಶಾಸಕರಾಗಿ ಮುಂದುವರಿಯಲು ಅವಕಾಶವಿದೆ.
No Result
View All Result
error: Content is protected !!