ರಾಜ್ಯದಲ್ಲಿ ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳ ತ್ವರಿತ ಜಾರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.
ಕೃಷ್ಣಾ, ಕಾವೇರಿ, ಮಹದಾಯಿ ಹಾಗೂ ಇತರೆ ನೀರಾವರಿ ಯೋಜನೆಗಳ ಅನುಷ್ಠಾನ/ನ್ಯಾಯಾಧೀಕರಣಗಳ ತೀರ್ಪುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ.
ಉಪ ಸಮಿತಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್, ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮತ್ತು ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು ಸದಸ್ಯರಾಗಿದ್ದಾರೆ.
ADVERTISEMENT
ADVERTISEMENT