ADVERTISEMENT
ಕರ್ನಾಟಕದಲ್ಲಿ ನಾಳೆ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್ನ ಪ್ರಧಾನ ಪೀಠ ಮತ್ತು ಕಲ್ಬರ್ಗಿ ಮತ್ತು ಧಾರವಾಡದಲ್ಲಿರುವ ಹೈಕೋರ್ಟ್ ಪೀಠಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಸೂಚನೆಯಂತೆ ರಜೆ ಘೋಷಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಎಂ ಎಸ್ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅಂದರೆ ಡಿಸೆಂಬರ್ ೧೧ರಂದು ಬುಧವಾರ ರಜೆ ಘೋಷಣೆ ಮಾಡಲಾಗಿದೆ.
ಜೊತೆಗೆ ಕರ್ನಾಟಕದಲ್ಲಿರುವ ಎಲ್ಲ ಜಿಲ್ಲಾ ನ್ಯಾಯಾಲಯಗಳಿಗೂ ನಾಳೆ ರಜೆ ಘೋಷಿಸಲಾಗಿದೆ. ಕೌಟುಂಬಿಕ ನ್ಯಾಯಾಲಯಗಳು, ಕಾರ್ಮಿಕ ನ್ಯಾಯಾಲಯಗಳು ಮತ್ತು ಕೈಗಾರಿಕಾ ನ್ಯಾಯಮಂಡಳಿಗಳಿಗೂ ರಜೆ ಘೋಷಿಸಲಾಗಿದೆ.
ಡಿಸೆಂಬರ್ 10ರಿಂದ 12ರವರೆಗೆ ಮೂರು ದಿನಗಳ ಶೋಕಾಚರಣೆ ಹಾಗೂ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಮುಖ್ಯ ನ್ಯಾಯಮೂರ್ತಿಗಳ ಆದೇಶಿತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ADVERTISEMENT