ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಆದಿತ್ಯ ಆಮ್ಲಾ ಬಿಸ್ವಾಸ್ – ಬೆಳಗಾವಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರು ಹುದ್ದೆಯಿಂದ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ
ಕ್ಯಾಪ್ಷನ್ ಡಾ ರಾಜೇಂದ್ರ ಕೆ – ಸಹಕಾರಿ ಸಂಘಗಳ ರಿಜಿಸ್ಟ್ರಾರ್ ಆಗಿ
ಸುಂದರೇಶ್ಬಾಬು ಎಂ – ಗದಗ ಜಿಲ್ಲಾಧಿಕಾರಿ ಹುದ್ದೆಯಿಂದ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಿರ್ದೇಶಕರಾಗಿ.
ಸುರಲ್ಕುಮಾರ್ ವಿಕಾಸ್ ಕಿಶೋರ್ – ಕೊಪ್ಪಳ ಜಿಲ್ಲಾಧಿಕಾರಿ ಹುದ್ದೆಯಿಂದ ಕೆಪಿಎಸ್ಸಿ ಕಾಯರ್ದರ್ಶಿಯಾಗಿ
ಶಿವಾನಂದ ಕಪಾಶಿ – ಕರ್ನಾಟಕ ಆಹಾರ ಪೂರೈಕೆ ನಿಗಮ ಎಂಡಿ ಹುದ್ದೆಯಿಂದ ದಾವಣಗೆರೆ ಜಿಲ್ಲಾಧಿಕಾರಿ ಆಗಿ.
ಹೊನ್ನಾಂಬ – ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹುದ್ದೆಯಿಂದ ಗದಗ ಜಿಲ್ಲಾಧಿಕಾರಿ ಆಗಿ.
ಆರ್ ಲತಾ – ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹುದ್ದೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆಗಿ.
ಲೋಖಂಡೆ ಸ್ನೇಹಲ್ ಸುಧಾಕರ್ – ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ ಪ್ರಧಾನ ವ್ಯವಸ್ಥಾಪಕ ಹುದ್ದೆಯಿಂದ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿಯಾಗಿ.
ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಯನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಮಾನವಾಗಿ ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಿದೆ.