ADVERTISEMENT
ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಲ್ಲಿ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದ್ದಾರೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜುಲೈ 8ರವರೆಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಜುಲೈ 8ರವರೆಗೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.
ADVERTISEMENT