5, 8,9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.
ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ನ್ಯಾಯಮೂರ್ತಿ ರವಿ ಹೊಸಮನಜ, ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದ್ದಾರೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಸುದರ್ಶನ್, ಬಿಜೆಪಿ ಸರ್ಕಾರವಿದ್ದಾಗ ಮಾಜಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್ (Congress) ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಎಕ್ಸಾಮ್ ನಡೆಸುವ ಚಿಂತನೆ ಮಾಡಲಾಗಿತ್ತು. ಇದೀಗ ಹೈಕೋರ್ಟ್ 5, 8,9 ಮತ್ತು 11ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದುಗೊಳಿಸಿದೆ.