ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರಲ್ಲಿ ನಿರ್ಬಂಧ ಹೇರಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕೆ ವಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಹಿರಿಯ ವಕೀಲ ಅಮೃತೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
ಕೋವಿಡ್ಗೆ ಸದ್ಯಕ್ಕೆ ಹೆದರಬೇಕಾದ ಪ್ರಮೇಯ ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಬೆಂಗಳೂರಲ್ಲಿ ನಿರ್ಬಂಧ ವಿಧಿಸಿದರೆ ಜನರು ಹೊರ ಪ್ರದೇಶಗಳಿಗೆ ತೆರಳುತ್ತಾರೆ. ಸರ್ಕಾರ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ ಎಂದು ಹೇಳಿತು.
ಕೋವಿಡ್ ಹರಡುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬೆಂಗಳೂರಲ್ಲಿ ನಿರ್ಬಂಧ ವಿಧಿಸುವಂತೆ ವಕೀಲ ಅಮೃತೇಶ್ ಅರ್ಜಿಯಲ್ಲಿ ಮನವಿ ಮಾಡಿದ್ದರು.