ಕೆಲವೇ ಹೊತ್ತಲ್ಲಿ ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠ ಹಿಜಬ್ ವಿವಾದ ಸಂಬAಧ ತೀರ್ಪು ಪ್ರಕಟಿಸಲಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೈಬುನೀಸಾ ಖಾಜಿ ಅವರಿರುವ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪು ಪ್ರಕಟಿಸಲಿದೆ.
ತರಗತಿಗಳಲ್ಲಿ ಹಿಜಬ್ ಧರಿಸಿ ಪಾಠ ಕೇಳಲು ಅವಕಾಶ ನೀಡುವಂತೆ ಕೋರಿ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ತರಗತಿಗಳಲ್ಲಿ ಧಾರ್ಮಿಕ ಸಂಕೇತದ ಎನ್ನನ್ನೂ ಧರಿಸದಂತೆ ಸೂಚಿಸಿತ್ತು.
ಹೈಕೋರ್ಟ್ ತೀರ್ಪು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.