ADVERTISEMENT
ವಿಧಾನಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕರಾಗಿ ಶಾಸಕ ಅರವಿಂದ್ ಬೆಲ್ಲದ್ ಅವರನ್ನು ನೇಮಕ ಮಾಡಲಾಗಿದೆ. ಪರಿಷತ್ನಲ್ಲಿ ವಿಪಕ್ಷ ಉಪ ನಾಯಕರಾಗಿ ಸುನಿಲ್ ವಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸಭೆಯ ಮುಖ್ಯ ಸಚೇತಕರಾಗಿ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಸೂಚನೆ ಮೇರೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕ ಮಾಡಿದ್ದಾಗಿ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೆ ಆಘಾತ ನೀಡಲಾಗಿದೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ನಲ್ಲಿ ಸಭಾ ನಾಯಕರಾಗಿದ್ದರು.
ಈ ಮೂಲಕ ಮೂರು ಪ್ರಮುಖ ಹುದ್ದೆಗಳಾದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ಮತ್ತು ಪರಿಷತ್ನಲ್ಲಿ ವಿಪಕ್ಷ ನಾಯಕ ಸ್ಥಾನ ಇವುಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಇಲ್ಲವಾಗಿದೆ.
ವಿಧಾನಸಭೆಯಲ್ಲಿ ವಿಪಕ್ಷ ಉಪ ನಾಯಕ, ಪರಿಷತ್ನಲ್ಲಿ ವಿಪಕ್ಷ ಉಪನಾಯಕ ಸ್ಥಾನ ಮತ್ತು ಮುಖ್ಯ ಸಚೇತಕ ಹುದ್ದೆಯಷ್ಟೇ ಉತ್ತರ ಕರ್ನಾಟಕ ಮತ್ತು ಹೈದ್ರಾಬಾದ್ ಕರ್ನಾಟಕಕ್ಕೆ ಸಿಕ್ಕಿದೆ.
ADVERTISEMENT