ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆ 8 ಗಂಟೆಯವರೆಗೆ ಮಳೆಯಾಗುವ ಸಾಧ್ಯತೆ ಇದೆ ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗಲಿದೆ.
ಮಲೆನಾಡು (ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ) ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ( ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ) ಅಲ್ಲಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಂಭವಿಸುವ ಸಾಧ್ಯತೆಯಿದೆ.
ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 33 ಮತ್ತು 21 ಡಿಗ್ರಿ ಸೆಲ್ಸಿಯಸ್ ಕ್ರಮವಾಗಿ ಆಗಿರಬಹುದು.
ADVERTISEMENT
ADVERTISEMENT