ಇವತ್ತು ಮತ್ತು ನಾಳೆ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ನಾಳೆ ಬೆಳಗ್ಗೆ ಅಂದರೆ ಶುಕ್ರವಾರ ಬೆಳಗ್ಗೆ 8.30ರವರೆಗೆ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 26ರ ಬೆಳಗ್ಗೆ 8.30ರಿಂದ ಜುಲೈ 27ರ ಬೆಳಗ್ಗೆ 8.30ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ವಿಜಯಪುರ ಮತ್ತು ಕಲ್ಬುರ್ಗಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ADVERTISEMENT
ADVERTISEMENT