ADVERTISEMENT
ಕರ್ನಾಟಕದಲ್ಲಿ ಮತ್ತೆ ಧಾರಾಕಾರ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇವತ್ತಿನಿಂದ ಸೋಮವಾರ ಬೆಳಗ್ಗಿನವರೆಗೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 14ರಂದು ಬುಧವಾರ:
ಬೆಂಗಳೂರು ನಗರ, ತುಮಕೂರು, ರಾಮನಗರ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆ ಎಚ್ಚರಿಕೆ ಅಂದರೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 15ರಂದು ಗುರುವಾರ:
ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅಂದರೆ ರರಣಭೀಕರ ಮಳೆಯ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅಂದರೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 16ರಂದು ಶುಕ್ರವಾರ:
ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ರಣಭೀಕರ ಮಳೆ ಅಂದರೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅಂದರೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
ಆಗಸ್ಟ್ 17ರಂದು ಭಾನುವಾರ:
ಕೋಲಾರ, ಚಾಮರಾಜನಗರ, ಹಾಸನ, ತುಮಕೂರು, ಬೆಂಗಳೂರು ನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅಂದರೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ADVERTISEMENT