ಜೂನ್ 21ರಿಂದ ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜೂನ್ 21ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 21ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 22ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ,ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 22ರಂದು ಬೀದರ್, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಮೈಸೂರು, ಧಾರವಾಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 23ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 23ರಂದು ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
64.5 ಮಿಲಿ ಮೀಟರ್ನಿಂದ 115.5 ಮಿಲಿ ಮೀಟರ್ವರೆಗೆ ಮಳೆಯ ಮುನ್ಸೂಚನೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಿಸಲಾಗುತ್ತದೆ.
115.6 ಮಿಲಿ ಮೀಟರ್ನಿಂದ 204.4 ಮಿಲಿ ಮೀಟರ್ ಮಳೆಯ ಮುನ್ಸೂಚನೆ ಇದ್ದರೆ ಆರೆಂಜ್ ಅಲರ್ಟ್ ಘೋಷಿಸಲಾಗುತ್ತದೆ.
204.5 ಮಿಲಿ ಮೀಟರ್ಗಿಂತಲೂ ಅಧಿಕ ಮಳೆಯ ಮುನ್ಸೂಚನೆ ಇದ್ದರೆ ರೆಡ್ ಅಲರ್ಟ್ ಘೋಷಿಸಲಾಗುತ್ತದೆ.
ADVERTISEMENT
ADVERTISEMENT