ಡಿಸೆಂಬರ್ 31ರಿಂದ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನೌಕರರ ಸಂಘಟನೆಗಳ ಪದಾಧಿಕಾರಿಗಳನ್ನು ರಾಜ್ಯ ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ.
ಡಿಸೆಂಬರ್ 27ರಂದು ಬೆಳಗ್ಗೆ 11.30 ನಿಮಿಷಕ್ಕೆ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಲಿದೆ. ಈ ಸಂಧಾನ ಸಭೆಯಲ್ಲಿ ಸಾರಿಗೆ ನಿಗಮಗಳ ವ್ಯವಸ್ಥಾಪಕರು ಮತ್ತು ಕಾರ್ಮಿಕ ಸಂಘದವರು ಹಾಜರಿರುವಂತೆ ಸೂಚಿಸಲಾಗಿದೆ.
ಡಿಸೆಂಬರ್ 31ರಿಂದ ಮುಷ್ಕರ ನಡೆಸುವ ಬಗ್ಗೆ ನಾಲ್ಕೂ ಸಾರಿಗೆ ನಿಗಮಗಳ ಸಿಬ್ಬಂದಿ ಮತ್ತು ನೌಕರರನ್ನು ಒಳಗೊಂಡ ಕಾರ್ಮಿಕ ಸಂಘಟನೆಗಳು ಡಿಸೆಂಬರ್ 9ರಂದು ಅಂದರೆ 21 ದಿನ ಮುಂಚಿತವಾಗಿ ಮುಷ್ಕರ ನಡೆಸುವ ಬಗ್ಗೆ ನೋಟಿಸ್ ನೀಡಿದ್ದರು.
ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು ನೌಕರರ ಒಕ್ಕೂಟ, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಸಂಘ, ರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರು ಮತ್ತು ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ.
2020ರ ಜನವರಿಯಿಂದ ಅಂದರೆ ಬಿಜೆಪಿ ಸರ್ಕಾರದ ಎರಡು ವರ್ಷದ ಅವಧಿ (25 ತಿಂಗಳ ಅವಧಿ) ಸೇರಿದಂತೆ 38 ತಿಂಗಳ ವೇತನ ಹಿಂಬಾಕಿ ಪಾವತಿ, ಈ ವರ್ಷದ ಜನವರಿ 1ರಿಂದಲೇ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಮತ್ತು ನಿವೃತ್ತರಾದ ನೌಕರರಿಗೆ ಇದೇ ವರ್ಷದ ಜೂನ್ 27ರಂದು ಹೊರಡಿಸಿದ್ದ ಸುತ್ತೋಲೆಯಂತೆ ಹಣ ಬಿಡುಗಡೆಗೆ ಆಗ್ರಹಿಸಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷ ಎಂದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಕ್ಕೆ ಬೆಂಗಳೂರು ಪೊಲೀಸ್ ಅಯುಕ್ತರಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ರಾವ್ ಗೌರವಾಧ್ಯಕ್ಷರು. ಭಾಸ್ಕರ್ ರಾವ್ ಬಿಜೆಪಿ ಪಕ್ಷದಲ್ಲಿದ್ದಾರೆ. ಆದರೆ ಅವರದ್ದೇ ಪಕ್ಷ ಬಿಜೆಪಿ 2020ರಿಂದ 2023ರ ಮಾರ್ಚ್ವರೆಗೆ ಅಧಿಕಾರದಲ್ಲಿದ್ದ 25 ತಿಂಗಳಲ್ಲಿ ಸಾರಿಗೆ ನಿಗಮಗಳ ನೌಕರರಿಗೆ ಬಾಕಿ ಉಳಿಸಿಕೊಂಡಿತ್ತು. ಆ ಬಾಕಿಯೂ ಒಳಗೊಂಡಂತೆ ಒಟ್ಟು 38 ತಿಂಗಳ ಬಾಕಿ ಪಾವತಿಗಾಗಿ ನೌಕರರು ಈಗ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31ರಿಂದ ಮುಷ್ಕರಕ್ಕೆ ಕರೆ ನೀಡಿದೆ.
ನಿಯಮಗಳನ್ನು ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಕಟ್ಟಲಾಗಿರುವ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಂತಹ ಅಕ್ರಮ ಕಟ್ಟಡಗಳಿಗೆ ಕಟ್ಟಡ ನಿರ್ಮಾಣ...
ಜಾತಿ ಆಧಾರಿತ ಮೀಸಲಾತಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದು, ಮೀಸಲಾತಿ ಸಂಬಂಧ ಮಾನದಂಡವನ್ನೇ ಬದಲಾಯಿಸುವಂತೆ ಆಗ್ರಹಿಸಿದ್ದಾರೆ. ಭಾರತದ ಸಂವಿಧಾನಕ್ಕೆ 75 ವರ್ಷ ತುಂಬಿದ...
ಅತೀ ಹೆಚ್ಚು ವಿಕೆಟ್ ಪಡೆದ 2ನೇ ಬೌಲರ್ ಎಂಬ ಹೆಗ್ಗಳಿಕೆಯ ಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ನಿವೃತ್ತಿ ಈ...
ಅಂಬೇಡ್ಕರ್..ಅಂಬೇಡ್ಕರ್ ಎಂದು ಹೇಳುವ ಬದಲು ದೇವರ ನಾಮವನ್ನು ಜಪಿಸಿದ್ದರೆ ಏಳೂ ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು ಎಂದು ಸಂಸತ್ತಿನ ಕೆಳಮನೆ ರಾಜ್ಯಸಭೆಯಲ್ಲಿ ಮಾತಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್...