ಇನ್ನೊಂದು ವಾರ ಕರ್ನಾಟಕ ಬಿಸಿಲ ಬೇಗೆಗೆ ತತ್ತರಿಸಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಮೇ 6ರವರೆಗೆ ಉತ್ತರ ಒಳನಾಡಿನ ರಾಯಚೂರು, ಕಲಬುರ್ಗಿ, ಬಾಗಲಕೋಟೆ ಯಾದಗಿರಿ ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸುಮಾರು 40-46˚C ಇರುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು ಸುಮಾರು 40-44˚C ಇರುವ ಸಾಧ್ಯತೆಯಿದೆ.
ಕೊಡಗು, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 33-40 ಡಿಗ್ರಿ ಸೆಲ್ಸಿಯಸ್ ತಾಪಮಾನವು ಇರುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಗರಿಷ್ಠ ತಾಪಮಾನ 38-47˚ಸೆಲ್ಸಿಯಸ್ ಇರಲಿದೆ.
ಮೇ 7 ಅಂದರೆ ಮಂಗಳವಾರದ ಬಳಿಕ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 2-3˚C ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ADVERTISEMENT
ADVERTISEMENT