8 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಯಾವುದೇ ಅಭಿವೃದ್ಧಿ ಕೆಲಸವನ್ನೂ ಮಾಡದೇ ಇದೀಗ ವಿವೇಕ್ ಅಗ್ನಿಹೋತ್ರಿ ಕಾಲಿಗೆ ಶರಣಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನರೇಂದ್ರ ಮೋದಿ 8 ವರ್ಷಗಳ ಕಾಲ ಯಾವುದೇ ಅಭಿವೃದ್ದಿ ಕೆಲಸವನ್ನೂ ಮಾಡಿಲ್ಲ. ಇದೀಗ ‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ಪಾದಕ್ಕೆ ಶರಣಾಗಿದ್ದಾರೆ ಎಂದು ಕಿಡಿನುಡಿಯನ್ನಾಡಿದ್ದಾರೆ.
BJP wants #TheKashmirFiles to be tax free.
Why not ask @vivekagnihotri to upload the whole movie on YouTube for FREE?
-CM @ArvindKejriwal pic.twitter.com/gXsxLmIZ09
— AAP (@AamAadmiParty) March 24, 2022
ದೆಹಲಿಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾಗೆ ಟ್ಯಾಕ್ಸ್ ಫ್ರೀ ಮಾಡಬೇಕೆಂದು ಬಿಜೆಪಿಯ ಹಲವು ನಾಯಕರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಯಾಕೆ ಮಾಡಬೇಕು..? ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿ ಎಲ್ಲರೂ ನೋಡುತ್ತಾರೆ ಎಂದು ಹೇಳಿದ್ದಾರೆ.
RT if you want @vivekagnihotri to upload #TheKashmirFiles on YouTube for FREE 🙏🏻pic.twitter.com/gXsxLmIZ09 https://t.co/OCTJs1Bvly
— AAP (@AamAadmiParty) March 24, 2022
ಇನ್ನು, ಅರವಿಂದ್ ಕೇಜ್ರಿವಾಲ್ ಅವರ ಈ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್, ಅರವಿಂದ್ ಕೇಜ್ರಿವಾಲ್ ಈ ಹಿಂದೆ ಕೆಲವು ಚಿತ್ರಗಳಿಗೆ ಟ್ಯಾಕ್ಸ್ ಫ್ರೀ ಮಾಡಿರುವ ಬಗ್ಗೆ ಟ್ವೀಟನ್ನು ಲಗತ್ತಿಸಿ. ಅರವಿಂದ್ ಕೇಜ್ರಿವಾಲ್ ವಿವೇಕ್ ಅಗ್ನಿಹೋತ್ರಿಯವರಿಗೆ ಚಿತ್ರವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಹೇಳಿದ್ದಾರೆ. ಯಾಕೆ ಟ್ಯಾಕ್ಸ್ ಫ್ರೀ ಕೊಡಬೇಕು..? ನಾಚಿಕೆಯಾಗಬೇಕು ಸಿಎಂ. ಈ ಚಿತ್ರಗಳಿಗೆ ಯಾಕೆ ಟ್ಯಾಕ್ಸ್ ಫ್ರೀ ಮಾಡಿದ್ದೀರಿ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Delhi CM @ArvindKejriwal asks @vivekagnihotri to upload #KashmirFiles on YouTube .. Why tax concessions ..? That doesn’t applies for other films .. Shame on you Ad CM …. Shame . pic.twitter.com/AgJFkh8orx
— B L Santhosh ( Modi Ka Parivar ) (@blsanthosh) March 24, 2022
1990 ರ ದಶಕದಲ್ಲಿ ಕಾಶ್ಮೀರದಲ್ಲಿದ್ದ ಕಾಶ್ಮೀರಿ ಪಂಡಿತರ ಪಲಾಯನದ ಬಗ್ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರು ದಿ ಕಾಶ್ಮೀರ್ ಫೈಲ್ಸ್ ಎನ್ನುವ ಚಿತ್ರ ನಿರ್ದೇಶಿಸಿದ್ದಾರೆ. ಈ ಚಿತ್ರ ಮಾರ್ಚ್ 11 ರಂದು ದೇಶಾದ್ಯಂತ ಬಿಡುಗಡೆಯಾಗಿದ್ದು, ಈಗಾಗಲೇ 200 ಕೋ.ರೂ ಗೂ ಅಧಿಕ ಗಳಿಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಚಿತ್ರಕ್ಕೆ ಉತ್ತರ ಪ್ರದೇಶ, ಕರ್ನಾಟಕ, ಹರಿಯಾಣ ಸೇರಿದಂತೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಟ್ಯಾಕ್ಸ್ ಫ್ರೀ ಮಾಡಿವೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ‘ವೈ’ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.