ನಂದಿನಿ ಹಾಲಿನ ದರವನ್ನು ಕರ್ನಾಟಕ ಹಾಲು ಮಹಾಮಂಡಳ ಹೆಚ್ಚಳ ಮಾಡಿದೆ. ಪ್ರತಿ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಮಾಧ್ಯಮಗೋಷ್ಠಿ ಮೂಲಕ ದರ ಹೆಚ್ಚಳದ ಬಗ್ಗೆ ಘೋಷಣೆ ಮಾಡಿದ್ದಾರೆ.
1 ಲೀಟರ್ ನಂದಿನಿ ಹಾಲಿನ (Nandini Milk) ಪ್ಯಾಕೆಟ್ಗೆ 50 ml ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು.
ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.
ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.
ADVERTISEMENT
ADVERTISEMENT