ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತದಾನದ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಸಿಬ್ಬಂದಿಗಳ ಜೊತೆ ಕೈಜೋಡಿಸಿದೆ.
ಲೋಕಸಭಾ ಚುನಾವಣೆಗೆ ಇನ್ನೆನೂ ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ ಚುನಾವಣಾ ಆಯೋಗವು ಜನರಲ್ಲಿ ಮತದಾನದ ಜಾಗೃತಿ ಮೂಡಿಸಲು ಅನೇಕ ರೀತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದೀಗ ಕೆಎಸ್ಆರ್ಟಿಸಿ ಸಂಸ್ಥೆಯು ಚುನಾವಣಾ ಆಯೋಗಕ್ಕೆ ಸಾಥ್ ನೀಡಿದೆ.
ಕೆಎಸ್ಆರ್ಟಿಸಿ ಬಸ್ಗಳ ಟಿಕೆಟ್ ಕೊನೆಯಲ್ಲಿ ಕನ್ನಡದಲ್ಲಿ ಜಾಗೃತಿ ಸಂದೇಶವನ್ನು ಬರೆಯಲಾಗಿದೆ. ಮತದಾನ ನಮ್ಮೆಲ್ಲರ ಹಕ್ಕು, 26-4-2024 ಹಾಗೂ 7-5-2024 ರಂದು ತಪ್ಪದೇ ಮತದಾನ ಮಾಡಿ ಎಂದು ಬರೆದಿದೆ. ಈ ಮೂಲಕ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರತಿದಿನ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಸಾರಿಗೆ ನಿಗಮ ಮುಂದಾಗಿದೆ.