ಹೊಸ ವರ್ಷದ ಆರಂಭದಲ್ಲೇ ಕರ್ನಾಟಕದಲ್ಲಿ ಜನಸಾಮಾನ್ಯರಿಗೆ ಆಘಾತ ನಿಶ್ಚಿತ. ಡಿಸೆಂಬರ್ 31ರಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು ನೌಕರರ ಒಕ್ಕೂಟ, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಸಂಘ, ರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರು ಮತ್ತು ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ಜಂಟಿಯಾಗಿ ಮುಷ್ಕರಕ್ಕೆ ಕರೆ ನೀಡಿವೆ.
2020ರ ಜನವರಿಯಿಂದ ಅಂದರೆ ಬಿಜೆಪಿ ಸರ್ಕಾರದ ಎರಡು ವರ್ಷದ ಅವಧಿ (25 ತಿಂಗಳ ಅವಧಿ) ಸೇರಿದಂತೆ 38 ತಿಂಗಳ ವೇತನ ಹಿಂಬಾಕಿ ಪಾವತಿ, ಈ ವರ್ಷದ ಜನವರಿ 1ರಿಂದಲೇ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಮತ್ತು ನಿವೃತ್ತರಾದ ನೌಕರರಿಗೆ ಇದೇ ವರ್ಷದ ಜೂನ್ 27ರಂದು ಹೊರಡಿಸಿದ್ದ ಸುತ್ತೋಲೆಯಂತೆ ಹಣ ಬಿಡುಗಡೆಗೆ ಆಗ್ರಹಿಸಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷ ಎಂದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಕ್ಕೆ ಬೆಂಗಳೂರು ಪೊಲೀಸ್ ಅಯುಕ್ತರಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ರಾವ್ ಗೌರವಾಧ್ಯಕ್ಷರು. ಭಾಸ್ಕರ್ ರಾವ್ ಬಿಜೆಪಿ ಪಕ್ಷದಲ್ಲಿದ್ದಾರೆ. ಆದರೆ ಅವರದ್ದೇ ಪಕ್ಷ ಬಿಜೆಪಿ 2020ರಿಂದ 2023ರ ಮಾರ್ಚ್ವರೆಗೆ ಅಧಿಕಾರದಲ್ಲಿದ್ದ 25 ತಿಂಗಳಲ್ಲಿ ಸಾರಿಗೆ ನಿಗಮಗಳ ನೌಕರರಿಗೆ ಬಾಕಿ ಉಳಿಸಿಕೊಂಡಿತ್ತು. ಆ ಬಾಕಿಯೂ ಒಳಗೊಂಡಂತೆ ಒಟ್ಟು 38 ತಿಂಗಳ ಬಾಕಿ ಪಾವತಿಗಾಗಿ ನೌಕರರು ಈಗ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್ 31ರಿಂದ ಮುಷ್ಕರಕ್ಕೆ ಕರೆ ನೀಡಿದೆ.
ಹೊಸ ವರ್ಷದ ಆರಂಭದಲ್ಲೇ ಕರ್ನಾಟಕದಲ್ಲಿ ಜನಸಾಮಾನ್ಯರಿಗೆ ಆಘಾತ ನಿಶ್ಚಿತ. ಡಿಸೆಂಬರ್ 31ರಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಕೆಎಸ್ಆರ್ಟಿಸಿ ಸಿಬ್ಬಂದಿ ಮತ್ತು...
ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೇನು ಹುಳುಗಳ ಹಿಂಡು ದಾಳಿ ಮಾಡಿದ ಘಟನೆ ಇಂದು ಒಡಿಶಾದಲ್ಲಿ ನಡೆದಿದೆ. ಇಲ್ಲಿನ ಭುಬನೇಶರದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತು ಸಿಬಿಐ ತನಿಖೆ...
ಸಂಗೀತ ಮಾಂತ್ರಿಕ, ಹಾಲಿ ರಾಜ್ಯ ಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಪ್ರವೇಶ ಮಾಡಲು ನಿರಾಕರಿಸಿದ ಘಟನೆಯು ನಿಜಕ್ಕೂ ಅವಮಾನಕರ ಸಂಗತಿ ಆಗಿದ್ದು, ಸಮಾಜದಲ್ಲಿ ಜಾತಿ...
ಡೇಟಿಂಗ್ ಆಪ್ ಮೂಲಕ ಪರಿಚಯವಾಗಿದ್ದ ಯುವಕನ ಮೇಲೆ ಯುವತಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 22 ವರ್ಷದ ಯುವಕ (ಅರ್ಜಿದಾರ) ಮತ್ತು ದೂರುದಾರೆ...