ಕೆಲ ತಿಂಗಳ ಹಿಂದೆಯಷ್ಟೇ ಆಮ್ ಆದ್ಮಿ ಪಾರ್ಟಿ ಸೇರಿದ್ದ ವಕೀಲ ಜಗದೀಶ್ ಅವರು ಆಮ್ ಆದ್ಮಿ ಪಾರ್ಟಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ವೀಡಿಯೋ ಸಂದೇಶದಲ್ಲಿ ಆಮ್ ಆದ್ಮಿ ಪಾರ್ಟಿ ಬಿಡುತ್ತಿರುವ ಬಗ್ಗೆ ಹೇಳಿಕೊಂಡಿದ್ದಾರೆ.
ರಾಜೀನಾಮೆ ಪತ್ರವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಆಪ್ ಬೆಂಗಳೂರು ಘಟಕದ ಮೋಹನ್ ದಾಸರಿ ಅವರಿಗೂ ಸಲ್ಲಿಸಿದ್ದೇನೆ ಎಂದು ಲಾಯರ್ ಜಗದೀಶ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ರಾಜಕೀಯ ವಿಸ್ತರಣೆ ಘಟಕದ ರಾಜೀನಾಮೆ ಸಲ್ಲಿಸಿದ್ದಾಗಿ ಲಾಯರ್ ಜಗದೀಶ್ ಹೇಳಿದ್ದಾರೆ.