ಚಿರತೆಯೊಂದು ಆಸ್ಪತ್ರೆಗೆ ನುಗ್ಗಿದ ಆತಂಕಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ವರದಿಯಾಗಿದೆ.
ಇಲ್ಲಿನ ನಂದೂರ್ಬಾರ್ನಲ್ಲಿರುವ ಖಾಸಗಿ ಆಸ್ಪತ್ರೆಯೊಳಗೆ ನುಗ್ಗಿದ ಚಿರತೆಯೊಂದು ಆತಂಕವನ್ನು ಹೆಚ್ಚಿಸಿತು. ಮಂಗಳವಾರ ರಾತ್ರಿ ಆಸ್ಪತ್ರೆಗೆ ನುಗ್ಗಿರುವ ಚಿರತೆ ಇಂದು ಬೆಳಗ್ಗೆ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯ ಕಣ್ಣಿಗೆ ಕಾಣಿಸಿಕೊಂಡಿದೆ. ಕೂಡಲೆ ಎಚ್ಚೆತ್ತ ಸಿಬ್ಬಂದಿ ಚಿರತೆ ಹೊಕ್ಕಿದ್ದ ಕೊಠಡಿಯ ಬಾಗಿಲು ಮುಚ್ಚಿ, ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದಾರೆ.
ಚಿರತೆ ನುಗ್ಗಿದ ಸುದ್ದಿ ತಿಳಿದು ರೋಗಿಗಳು ಮತ್ತು ಸಿಬ್ಬಂದಿ ಆತಂಕಕ್ಕೊಳಗಾದ್ರೆ, ಆಸ್ಪತ್ರೆಯ ಹೊರಗಡೆ ಚಿರತೆಯನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದರು.
ಇನ್ನು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.