ರಾಜಧಾನಿ ಬೆಂಗಳೂರಿಗೆ ಸಾಮಿಪ್ಯವಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭಾನುವಾರ ತಡರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಪೆದ್ದತುಕಂಪನಹಳ್ಳಿ, ಕದಿರನಗಿರಿಪಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ 9 ಗಂಟೆಯ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಈ ಗ್ರಾಮದಗಳ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಯಾವುದೇ ಆಸ್ತಿ-ಪಾಸ್ತಿ ಹಾಗೂ ಜೀವ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.