ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಆಂಧ್ರಪ್ರದೇಶ, ದೆಹಲಿ, ಗೋವಾ, ಗುಜರಾತ್, ಹಿಮಾಚಲಪ್ರದೇಶ, ಹರಿಯಾಣ, ಕೇರಳ, ತೆಲಂಗಾಣ, ಪಂಜಾಬ್,ತಮಿಳುನಾಡು ಮತ್ತು ಉತ್ತರಾಖಂಡ್ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಕರ್ನಾಟಕ, ರಾಜಸ್ಥಾನ, ತ್ರಿಪುರ ಮತ್ತು ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಛತ್ತೀಸ್ಗಢ ಮತ್ತು ಅಸ್ಸಾಂನಲ್ಲಿ ಮೂರು ಹಂತದಲ್ಲಿ ಮತದಾನ ನಡೆಯಲಿದೆ.
ಮಹಾರಾಷ್ಟ್ರ ಮತ್ತು ಜಮ್ಮುಕಾಶ್ಮೀರದಲ್ಲಿ ಐದು ಹಂತದಲ್ಲಿ ನಡೆಯಲಿದೆ.
ಒಡಿಶಾ, ಮಧ್ಯಪ್ರದೇಶ, ಜಾರ್ಖಂಡ್ನಲ್ಲಿ ನಾಲ್ಕು ಹಂತದಲ್ಲಿ ಮತದಾನ ನಡೆಯಲಿದೆ.
ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.