ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಹೊರ ನಡೆಯುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿಯೂ ಇಂಥದ್ದೇ ಬೆಳವಣಿಗೆ ನಡೆದಿದೆ. ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ (MD Lakshminarayana) ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎಂ.ಡಿ ಲಕ್ಷ್ಮೀನಾರಾಯಣ (MD Lakshminarayana) ಪ್ರಕಟಿಸಿದ್ದಾರೆ.
ಇದನ್ನೂ ಓದಿ : Jammu And Kashmir : ಕಾಂಗ್ರೆಸ್ಗೆ ಮತ್ತೊಂದು ಅಘಾತ – 51 ಮಂದಿ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ನನಗೆ ಬೇಸರವಾಗಿದೆ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.