ಕಾರವಾರ:- ಪ್ರಜಾಪ್ರಭುತ್ವ ವ್ಯವಸ್ಥೆ ವಿರೋಧಿಸುವವರನ್ನು ಮತದಾರರು ಸೋಲಿಸಲಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಧರ್ಮದ ಹೆಸರಲ್ಲಿ ದ್ವೇಷ ಬಿತ್ತುವವರನ್ನು ಮತದಾರರು ಸೋಲಿಸಬೇಕು ಎಂದರು.
ಸಂವಿಧಾನ ಬದಲಿಸುವ ಮಾತುಗಳನ್ನಾಡುವ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ವಿರೋಧಿಸುವ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು.
ದಕ್ಷಿಣ ಕನ್ನಡದಲ್ಲಿ ನಳೀನ್ ಕುಮಾರ್ ಗೆ ಸಹ ಬಿಜೆಪಿ ಟಿಕೆಟ್ ಕೊಡಬೇಕು. ಆಗ ಅವರಿಗೆ ಮತದಾರರು ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಧರ್ಮ ಪ್ರೀತಿಸುವ ಜನರು ಕರಾವಳಿ ಭಾಗದಲ್ಲಿ ಹೆಚ್ಚಿದ್ದಾರೆ. ಅವರ ಭಾವನೆಗಳೊಂದಿಗೆ ಚೆಲ್ಲಾಟವಾಡಿ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಕೆಟ್ಟ ಗುಣ. ಹಿಂದಿನಂತೆ ಕೋಮು ಧ್ರುವೀಕರಣದ ಚಟುವಟಿಕೆಗೆ ಈ ಬಾರಿ ಅವಕಾಶ ಸಿಗದು ಎಂದು ಹೇಳಿದರು.
ನಾಲ್ಕು ವರ್ಷ ಜನರಿಂದ ದೂರವಿದ್ದು ಚುನಾವಣೆ ಸಮೀಪಿಸಿದಾಗ ಸಮಾಜದ ಸಾಮರಸ್ಯ ಕದಡುವ ಮಾತುಗಳನ್ನಾಡವವರನ್ನು ಮತದಾರರು ದೂರ ಇಡಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.