ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ದಾಖಲೆಯ ಪ್ರಚಂಡ ಜಯ ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರು 12,205 ಮತಗಳಿಂದ ಗೆದ್ದಿದ್ದಾರೆ.
ಕಾಂಗ್ರೆಸ್ಗೆ 45,275 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 33,878 ಮತಗಳನ್ನು ಪಡೆದಿದ್ದಾರೆ.
ಇದೇ ಮೊದಲ ಬಾರಿಗೆ ದಕ್ಷಿಣ ಪದವೀಧರದಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಭದ್ರಕೋಟೆಯನ್ನು ಹಸ್ತ ಪಾಳಯ ಹೊಡೆದಿದೆ.
ಜೆಡಿಎಸ್ ಎಂಎಲ್ಸಿ ಮರಿತಿಬ್ಬೇಗೌಡ ಬಹಿರಂಗ ಬೆಂಬಲ ಮತ್ತು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಶಾಸಕರ ಅಸಮಾಧಾನ ಜೆಡಿಎಸ್ಗೆ ಮುಳುವಾಗಿದೆ.
ಕ್ಷೇತ್ರಕ್ಕೆ ಹೊರಗಿನವರು ಎಂಬ ಆರೋಪ ಹೊತ್ತಿದ್ದ ಹೆಚ್ ಕೆ ರಾಮು ಅವರು ಮೂರನೇ ಸ್ಥಾನದಲ್ಲಿ 19,630 ಹೀನಾಯ ಸೋಲು ಅನುಭವಿಸಿದ್ದಾರೆ. ಕಳೆದ ಬಾರಿ ಈ ಕ್ಷೇತ್ರದಲ್ಲಿ ಕೆ ಟಿ ಶ್ರೀಕಂಠೇಗೌಡ ಅವರು ಗೆದ್ದಿದ್ದರು.