ಮಧ್ಯಪ್ರದೇಶದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ನ ಕಮಲ ನಾಥ್ ಇಂದು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಡಾ.ಗೋವಿಂದ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಕಮಲ್ ನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ, ‘ಮಧ್ಯ ಪ್ರದೇಶದ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀವು ನೀಡಿದ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ ಎಂಬುದನ್ನು ನಿಮಗೆ ತಿಳಿಸಲು ಇಚ್ಛಿಸುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿಮ್ಮ ಕೊಡುಗೆಯನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದೇವೇಳೆ, ಡಾ. ಗೋವಿಂದ್ ಸಿಂಗ್ ಅವರನ್ನು ವಿರೋಧ ಪಕ್ಷದ ನಾಯಕನಾಗಿ ನೇಮಕ ಮಾಡುವ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅಂಗೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮನ್ ಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಇವರು ಮಧ್ಯಪ್ರದೇಶದ ಮುಖ್ಯಮಂತ್ರಿ ಕಾರ್ಯನಿರ್ವಹಿಸಿದ್ದಾರೆ.