ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಪಕ್ಷ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಸಲ್ಲಿಸಿದ್ದಾರೆ.
ಜೈಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಕೈಗೊಳ್ಳಲಾದ ನಿರ್ಣಯಗಳ ಪ್ರಕಾರ ಒಬ್ಬರು ಒಂದು ಹುದ್ದೆಯಲ್ಲಿ ಮಾತ್ರ ಇರಬೇಕು.
ಕಾಂಗ್ರೆಸ್ ಪಕ್ಷದ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ಖರ್ಗೆ ಆಯ್ಕೆ ಆಗುವುದು ಖಚಿತ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.