ಮಂಡ್ಯದ ಯಾದವನಹಳ್ಳಿ ಗ್ರಾಮದ ಯುವಕನೊಬ್ಬನಿಗೆ ಮರ್ಮಾಂಗದ ಖತ್ನಾ ಮಾಡಿ ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ (Forced conversion) ಮಾಡಲು ಯತ್ನಿಸಿದ 11 ಮಂದಿ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರ ತಾಲೂಕಿನ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ (26) ಎಂಬವರು ತನ್ನನ್ನು ಬಲವಂತವಾಗಿ ಮತಾಂತರಕ್ಕೆ (Forced conversion) ಯತ್ನಿಸಿದ್ದಾರೆ ಎಂದು 11 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಶಾಕಿಲ್ ಮತ್ತು ಅಲ್ತಾಪ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹಣಕಾಸಿನ ಸಮಸ್ಯೆ ಬಗೆಹರಿಸಲಾಗುವುದು ಎಂದು ಆತನನ್ನು ನಂಬಿಸಿ ಕಳೆದ ಮೇ ತಿಂಗಳಿನಲ್ಲಿ ಶ್ರೀಧರ ಅವರನ್ನು ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಅಲ್ಲಿನ ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರು. ನಂತರ ನಂತರ ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ನಂಬಿಸಿ ಖತ್ನಾ ಮಾಡಿದ್ದಾರೆ. ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಲ್ಲದೆ, ಮತಾಂತರದ ಬಗ್ಗೆ ಬಾಂಡ್ ಪೇಪರ್’ನಲ್ಲಿ ಸಹಿ ಪಡೆದಿದ್ದಾರೆ. ಅಲ್ಲಿಂದ ತಿರುಪತಿಗೆ ಕರೆದೊಯ್ದು, ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನೂ ಶುರು ಮಾಡಿದ್ದಾರೆ. ಈ ಸಂಬಂಧ ಪೊಲೀಸ್ ತಂಡ ಬೆಂಗಳೂರಿಗೂ ತೆರಳಿದೆ ಎನ್ನಲಾಗಿದೆ.
ಇದನ್ನೂ ಓದಿ : ಮತಾಂತರ ನಿಷೇಧ ಕಾಯ್ದೆ ಜಾರಿ : ದಂಪತಿ ವಿರುದ್ಧ ಮೊದಲ ಪ್ರಕರಣ ದಾಖಲು