ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿಯಾದರು.
ಕರ್ನಾಟಕ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಇದೇ ಮೊದಲ ಬಾರಿಗೆ ಸುಮಲತಾ ಅವರು ಭೇಟಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಐದರಲ್ಲಿ ಗೆದ್ದಿದೆ. ಕಾಂಗ್ರೆಸ್ ಬೆಂಬಲಿತ ದರ್ಶನ್ ಪುಟ್ಟಣಯ್ಯ ಅವರು ಮೇಲುಕೋಟೆಯಲ್ಲಿ ಗೆದ್ದಿದ್ದಾರೆ. ಕೆ ಆರ್ ಪೇಟೆಯಲ್ಲಷ್ಟೇ ಜೆಡಿಎಸ್ ಗೆದ್ದಿದೆ.
ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರ ಗೆಲುವಿಗೆ ಸುಮಲತಾ ಅಂಬರೀಶ್ ಅವರ ಬೆಂಬಲವೂ ಕಾರಣ ಎಂದು ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಡಾ ಇಂದ್ರೇಶ್ ಅವರು ಬಹಿರಂಗ ಆರೋಪ ಮಾಡಿದ್ದರು.
ಪ್ರಧಾನಿ ಮೋದಿಯವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಉದ್ಘಾಟನೆಗೆ ಬರುವುದಕ್ಕೆ ಮೊದಲು ಸುಮಲತಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದರು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕೈಗೊಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರನ್ನು ಬೆಂಬಲಿಸಿ ತಪ್ಪು ಮಾಡಿದೆವು ಎಂದು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯನವರು ಹೇಳಿದ್ದರು.
ADVERTISEMENT