ಸೌಂದರ್ಯ ಸ್ಪರ್ಧೆ ಲಿವಾ ಮಿಸ್ ದಿವಾ ಯುನಿವರ್ಸ್-2022 ಪ್ರಶಸ್ತಿಯನ್ನು ಈ ಬಾರಿ ಕನ್ನಡತಿ, ಕರಾವಳಿ ಮೂಲತದ ದಿವಿತಾ ರೈ (Divita Rai) ಗೆದ್ದುಕೊಂಡಿದ್ದಾರೆ. ಇದರೊಂದಿಗೆ ದಿವಿತಾ, ಮಿಸ್ ಯೂನಿವರ್ಸ್ 2022ಕ್ಕೆ ಭಾರತವನ್ನು ಪ್ರತಿನಿಧಿಸಲು ಅರ್ಹರಾಗಿದ್ದಾರೆ.
ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ 2021ರ ಮಿಸ್ ಯೂನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022ರ ಪ್ರಶಸ್ತಿ ಕಿರೀಟವನ್ನು ದಿವಿತಾ (Divita Rai) ಅವರಿಗೆ ತೊಡಿಸಿದ್ದಾರೆ. ತೆಲಂಗಾಣದ ಪ್ರಗ್ಯಾ ಅಯ್ಯಗರಿ ಲಿವಾ ಮಿಸ್ ದಿವಾ ಸೂಪರ್ನ್ಯಾಷನಲ್ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಇದನ್ನೂ ಓದಿ : ಕರ್ನಾಟಕದ ಸಿನಿ ಶೆಟ್ಟಿಗೆ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್’ ಕಿರೀಟ
ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ತೊಡಿಸಿದರು.
ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರ ತಂದೆ ದಿಲೀಪ್ ರೈ ಹಾಗೂ ತಾಯಿ ಪವಿತ್ರಾ ರೈ. ತಂದೆ ಉದ್ಯೋಗದ ಕಾರಣದಿಂದಾಗಿ ದಿವಿತಾ ಬೇರೆ ಬೇರೆ ಸ್ಥಳಗಳಲ್ಲಿ ಬೆಳೆದಿದ್ದರು. ಮುಂಬೈನಲ್ಲಿ ನೆಲೆಸಿರುವ ಅವರು ಜೆ.ಜೆ.ಕಾಲೇಜ್ ಆಫ್ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದಿದ್ದಾರೆ. ಇದರ ಜೊತೆಗೆ ಮಾಡೆಲ್ಲಿಂಗ್ ಸಹ ಮಾಡಿದ್ದಾರೆ.
ಲೀವಾ ಮಿಸ್ ದೀವಾ ಯೂನಿವರ್ಸ್-2020ರ ಪ್ರಶಸ್ತಿಯನ್ನು ಉಡುಪಿಯ ಉದ್ಯಾವರ ಕೊರಂಗ್ರಪಾಡಿ ನಿವಾಸಿ ಅಡ್ಲಿನ್ ಕ್ಯಾಸ್ಟಲಿನೊ ಪಡೆದುಕೊಂಡಿದ್ದರು.
ಇದನ್ನೂ ಓದಿ : Harnaaz Sandhu – ಮಿಸ್ ಯೂನಿವರ್ಸ್ ಹಾರ್ನಾಜ್ ಹಾಟ್ ಫೋಟೋಗಳ ಝಲಕ್