ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಎದುರು ಖಾಸಗಿ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಬಸ್ ಮತ್ತು ಬೈಕ್ ಎರಡೂ ಹೊತ್ತಿ ಉರಿದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಬಸ್ ಕೆಳಗಡೆ ಬಿದ್ದ. ಇತ್ತ ಇದ್ದಕಿದ್ದಂತೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಈ ಬಸ್ ಸ್ಟೇಟ್ ಬ್ಯಾಂಕ್ ಗೆ ಹೋಗುತ್ತಿತ್ತು. ಗಾಯಾಳು ಬೈಕ್ ಸವಾರನನ್ನು 26 ವರ್ಷದ ಡೈಲಾನ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ 2.45ರ ಸುಮಾರಿಗೆ ಅವಘಡ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳದಲ್ಲಿ ಹಾಕಲಾಗಿರುವ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ದೂರು ದಾಖಲಿಸಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.