ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಿವೃತ್ತ ಕಾರ್ಯನಿವಾರ್ಹಕ ಇಂಜಿನಿಯರ್ಗೆ 6 ವರ್ಷಗಳ ಶಿಕ್ಷೆ ವಿಧಿಸಿರುವ ಮಂಗಳೂರು ನ್ಯಾಯಾಲಯ, 2.5 ಕೋಟಿ ರೂಪಾಯಿ ದಂಡ ವಿಧಿಸಿದೆ.
ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ಕೋರ್ಟ್ನ ನ್ಯಾಯಾಧೀಶ ಬಿ ಬಿ ಜಾಕಟಿ ಈ ತೀರ್ಪು ನೀಡಿದ್ದಾರೆ.
ಸಣ್ಣ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದ ಎನ್ ಟಿ ರಾಜಗೋಪಾಲ್ ಅವರ ವಿರುದ್ಧ 2010ರ ಮಾರ್ಚ್ 17ರಂದು ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಗಳಿಕೆ ಸಂಬಂಧ ಆರೋಪಪಟ್ಟಿ ಸಲ್ಲಿಸಿದ್ದರು.
ಒಂದು ವೇಳೆ ದಂಡ ಪಾವತಿಸಲು ವಿಫಲರಾದರೆ ಮತ್ತೆ ಹೆಚ್ಚುವರಿಯಾಗಿ ಒಂದೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಎನ್ ಟಿ ರಾಜಗೋಪಾಲ್ ಅವರು ಯಾದಗಿರಿ ಜಿಲ್ಲಾ ಪಂಚಾಯತ್ನಲ್ಲಿ ಇಂಜಿನಿಯರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಇವರು ಮಂಗಳೂರು ಜೈಲಿನಲ್ಲಿದ್ದಾರೆ.
ADVERTISEMENT
ADVERTISEMENT