ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟçದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ.
`ಬಸ್, ಶಾಲೆ, ಕಚೇರಿ, ರೈಲು ಮುಂತಾದ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುತ್ತಿದ್ದೇವೆ. ಆದರೆ ಕಡ್ಡಾಯವಲ್ಲದ ಕಾರಣ ದಂಡ ವಿಧಿಸುತ್ತಿಲ್ಲ’ ಎಂದು ಮಹಾರಾಷ್ಟçದ ಆರೋಗ್ಯ ಸಚಿವ ರಾಜೇಶ್ ತೋಪೆ ಹೇಳಿದ್ದಾರೆ.
`ಮುಂಬೈ, ಪಾಲ್ಗಾರ್, ಪುಣೆ, ಥಾಣೆಯಲ್ಲಿ ಕೋವಿಡ್ ಕೇಸ್ ಹೆಚ್ಚಳ ಆಗುತ್ತಿದೆ. ಹೀಗಾಗಿ ಭಾರತದಲ್ಲೂ ಕೋವಿಡ್ ಕೇಸ್ ಹೆಚ್ಚಳ ಆಗುತ್ತಿದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ನಾವು ಮನವಿ ಮಾಡುತ್ತಿದ್ದೇವೆ’ ಎಂದು ಸಚಿವ ತೋಪೆ ಹೇಳಿದ್ದಾರೆ.
ಕರ್ನಾಟಕ, ಮಹಾರಾಷ್ಟç ಸೇರಿದಂತೆ ಐದು ರಾಜ್ಯಗಳಿಗೆ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಅಗತ್ಯ ಕ್ರಮಕ್ಕೆ ಸೂಚಿಸಿ ಕೇಂದ್ರ ಸರ್ಕಾರ ಪತ್ರ ಬರೆದಿತ್ತು.