ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಭೈರತಿ ಬಸವರಾಜ್ ಅವರನ್ನು ದಿಢೀರ್ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆದರೆ, ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಖಾಲಿ ಉಳಿದಿತ್ತು.
ಈ ಮಧ್ಯೆ, ಮಲೆನಾಡು ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಾಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೈರತಿ ಬಸವರಾಜ ಅವರನ್ನು ನೇಮಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ನಗರಾಭಿೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಯೂ ಆಗಿರುವ ಭೈರತಿ ಬಸವರಾಜ್ ಅವರು ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಹೊಣೆ ನೀಡಲಾಗಿದೆ.