ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಮತ್ತು ಸೊರಬ ವಿಧಾನಸಭಾ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರಿಗೆ ಹಿನ್ನಡೆಯಾಗಿದೆ.
ಅಲ್ಲದೇ 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ಮೊತ್ತ ಪಾವತಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ಆದೇಶಿಸಿದೆ.
ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆಗೆ 2011ರಲ್ಲಿ ಬಾಕಿ ಪಾವತಿಗಾಗಿ 6 ಕೋಟಿ 60 ಲಕ್ಷ ರೂಪಾಯಿ ಮೊತ್ತದ ಚೆಕ್ ನೀಡಿದ್ದರು.
ಆದರೆ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆ ಮಧು ಚೆಕ್ಬೌನ್ಸ್ ಕೇಸ್ ದಾಖಲಿಸಿತ್ತು.
ADVERTISEMENT
ADVERTISEMENT