ನಕಲಿ ಗುರುತಿನ ಚೀಟಿ ಪತ್ತೆ ಪ್ರಕರಣದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಸಂಕಷ್ಟ ಎದುರಾಗುವಂತಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ
ರಾಜರಾಜೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಮುನಿರತ್ನ ಆಯ್ಕೆ ಆಗಿದ್ದರು. ಆದರೆ, ಮುನಿರತ್ನ ಅವರ ಗೆಲುವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಕೆ ಆಗಿತ್ತು. ಈ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಸೋಮವಾರ ಆರಂಭವಾಗಿದೆ.
ಮುನಿರತ್ನ ವಿರುದ್ಧ ಪರಾಜಿತ ಅಭ್ಯರ್ಥಿ ಮುನಿರಾಜು ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ನಡೆಸಿದೆ.
ಜನತಾ ಪ್ರತಿನಿಧಿ ಕಾಯ್ದೆ 1951ರ ಕಲಂ 123ರ ಪ್ರಕಾರ ಪ್ರತಿವಾದಿಯ ಆಯ್ಕೆ ಅನೂರ್ಜಿತಗೊಳಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.