ADVERTISEMENT
ವಿದೇಶ ಪ್ರವಾಸಕ್ಕೆ ತೆರಳಿದ್ದ ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಅವರು ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ (Bengaluru) ವಾಪಸ್ ಆಗುತ್ತಿದ್ದಾರೆ.
ಕೆಲವೇ ದಿನಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಚಿವ ಸಂಪುಟ ಪುನರ್ರಚನೆ ಆಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.
ಮುರುಗೇಶ್ ನಿರಾಣಿ ಅವರು 10 ದಿನಗಳ ಜಪಾನ್ ಪ್ರವಾಸ ಕೈಗೊಂಡಿದ್ದರು.
ಆದರೆ ಉಳಿದ ಐದು ದಿನಗಳ ಪ್ರವಾಸ ಮೊಟಕುಗೊಳಿಸಿ ಇವತ್ತು ಜಪಾನ್ (Japan) ರಾಜಧಾನಿ ಟೋಕಿಯೋದಿಂದ (Tokyo) ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ADVERTISEMENT