ADVERTISEMENT
ಬಿಜೆಪಿ ದೆಹಲಿ ನಾಯಕರ ಆದೇಶವನ್ನು ಧಿಕ್ಕರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿಗಳನ್ನು ಬದಲಾವಣೆ ಮಾಡಿದ್ದಾರೆ.
ಸಚಿವ ಆನಂದ್ ಸಿಂಗ್ ಒತ್ತಡಕ್ಕೆ ಮಣಿದು ಅವರಿಗೆ ಮತ್ತೆ ವಿಜಯನಗರ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ.
ಆನಂದ್ ಸಿಂಗ್ ಅವರು ಪಕ್ಕದ ಜಿಲ್ಲೆ ಕೊಪ್ಪಳದ ಜಿಲ್ಲಾ ಉಸ್ತುವಾರಿ ಆಗಿದ್ದರು.
ಬಳ್ಳಾರಿಯನ್ನು ವಿಭಜಿಸಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಿಕೊಂಡ ಸಚಿವ ಆನಂದ್ ಸಿಂಗ್ ಈಗ ತಮ್ಮ ತವರು ಜಿಲ್ಲೆಗೆ ಉಸ್ತುವಾರಿ ಆಗಿದ್ದಾರೆ.
ಸಚಿವರನ್ನು ಅವರ ತವರು ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಕ ಮಾಡಬಾರದು ಎಂದು ಬಿಜೆಪಿಯ ದೆಹಲಿಯ ನಾಯಕರು ಸಿಎಂ ಬೊಮ್ಮಾಯಿ ಅವರಿಗೆ ಸೂಚಿಸಿದ್ದರು.
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆ ಉಸ್ತುವಾರಿ ನೀಡಲಾಗಿದೆ.
ADVERTISEMENT