ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ರಂದು ಅಂದರೆ ಸೋಮವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಸೋಮವಾರದಂದು ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿದೆ.
ಪದವೀಧರ ಚುನಾವಣೆ ನಡೆಯಲಿರುವ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಯಲ್ಲಿ ಮತದಾರರಾಗಿರುವ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲಾ-ಕಾಲೇಜುಗಳ ನೌಕರರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರರು, ರಾಷ್ಟಿçÃಕೃತ ಮತ್ತು ಇತರೆ ಬ್ಯಾಂಕುಗಳ ನೌಕರರು, ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು, ಎಲ್ಲ ವ್ಯವಹಾರಿಕ ಸಂಸ್ಥೆಗಳು ಮತ್ತು ಖಾಯಂ ಹಾಗೂ ದಿನಗೂಲಿ ಕೆಲಸ ನಿರ್ವಹಿಸುವ ಪದವೀಧರರಿಗೆ ವಿಶೇಷ ರಜೆ ಘೋಷಿಸಲಾಗಿದೆ.
ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿರುವ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಹಾಗೂ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿಕ್ಷಕ ಮತಯದಾರರಿಗೆ ಸೀಮಿತವಾಗಿ ಜೂನ್ 13ರಂದು ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.