ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಗೆ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮತ್ತೊಮ್ಮೆ ಅಧ್ಯಕ್ಷರಾಗಿ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸಹಕಾರಿ ಧುರೀಣ SCDCC Bank ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮುಂದಿನ 5 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಇವರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಕಳೆದ 2 ದಶಕಗಳಿಂದಲೂ ಅಧ್ಯಕ್ಷರಾಗಿದ್ದು, ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಿ. ಇದರ ನಿರ್ದೇಶಕರಾಗಿದ್ದು, ಕರಾವಳಿ ಸಹಕಾರಿ ಕ್ಷೇತ್ರಕ್ಕೆ ಹೆಮ್ಮೆಯಾಗಿರುತ್ತಾರೆ. ಇದನ್ನೂ ಓದಿ : ತುಮಕೂರು: ಹಾಲು ಅಳತೆಯಲ್ಲಿ ಮೋಸ: ರೈತನ ಮೇಲೆ ಡೈರಿ ಕಾರ್ಯದರ್ಶಿ ಹಲ್ಲೆಗೆ ಯತ್ನ