ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಸತತ ಎರಡನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದ ಸಂಭ್ರಮದಲ್ಲಿರುವ ಬಿಜೆಪಿ ಈಗ ತನ್ನ ಚುನಾವಣಾ ಗಮನವನ್ನು ಕರ್ನಾಟಕದತ್ತ ಹೊರಳಿಸಿದ್ದು ಏಪ್ರಿಲ್ 5ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಏಪ್ರಿಲ್ 1ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ. ಒಂದೇ ವಾರದ ಅಂತರದಲ್ಲಿ ಮೋದಿ, ಶಾ ಭೇಟಿ ಬಿಜೆಪಿಯ ಚುನಾವಣಾ ಸಿದ್ಧತೆಗೆ ಇನ್ನೂ ಬಿರುಸು ನೀಡಲಿದೆ.
ಶಾ ಭೇಟಿಗೂ ಹಿಂದಿನ ದಿನ ಅಂದರೆ ಮಾರ್ಚ್ 31ರಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಿದ್ದಾರೆ.
ಮೂಲಗಳ ಪ್ರಕಾರ ಅಮಿತ್ ಶಾ ಭೇಟಿಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಂಘಟನಾತ್ಮಕ ಬದಲಾವಣೆಗಳು ಆಗಬಹುದು ಎನ್ನಲಾಗುತ್ತಿದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಪದಾಧಿಕಾರಿಗಳ ಅವಧಿ ಜುಲೈ-ಆಗಸ್ಟ್ ತಿಂಗಳಿಗೆ ಮುಗಿಯಲಿದೆಯಾದರೂ ಅದಕ್ಕೂ ಮೊದಲು ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೂ ಅಚ್ಚರಿ ಇಲ್ಲ. ಹೊಸ ಬಿಜೆಪಿ ರಾಜ್ಯಾಧ್ಯಕ್ಷರಾಗುವವರ ಹೆಸರಲ್ಲಿ ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರ ಹೆಸರು ಮುಂಚೂಣಿಯಲ್ಲಿದೆ.
ಕೇAದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಏಪ್ರಿಲ್ 1ರಂದು ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಘೋಷಿಸಿರುವ ಕ್ಷೀರ ಅಭಿವೃದ್ಧಿ ಬ್ಯಾಂಕ್ನ ಚಿಹ್ನೆ ಬಿಡುಗಡೆ ಮತ್ತು ಮತ್ತೆ ಜಾರಿ ಆಗಲಿರುವ ಯಶಸ್ವಿನಿ ವಿಮೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ರಾಜ್ಯದ ಬಿಜೆಪಿ ನಾಯಕರೊಂದಿಗೆ ಚುನಾವಣಾ ಸಿದ್ಧತೆಗಳ ಬಗ್ಗೆಯೂ ಚರ್ಚಿಸಲಿದ್ದಾರೆ.
ಮೂಲಗಳ ಪ್ರಕಾರ ಉಸ್ತುವಾರಿ ಅರುಣ್ ಸಿಂಗ್ ಏಪ್ರಿಲ್ ತಿಂಗಳಿAದ ಪ್ರತಿ ತಿಂಗಳು 10 ದಿನ ಕರ್ನಾಟಕದಲ್ಲೇ ತಂಗಲಿದ್ದು, ಪಕ್ಷ ಸಂಘಟನೆ ಮತ್ತು ಚುನಾವಣಾ ಸಿದ್ಧತೆಗಳ ಮೇಲೆ ನೇರ ನಿಗಾ ಇಡಲಿದ್ದಾರೆ ಮತ್ತು ಪಕ್ಷದ ಕಾರ್ಯಕರ್ತರ ಜೊತೆಗೆ ನಿರಂತರ ಸಂವಾದ ನಡೆಸಲಿದ್ದಾರೆ.