ADVERTISEMENT
ಒಂದು ವಾರದ ವಿಳಂಬದ ಬಳಿಕ ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಮುಂಗಾರು ಮಳೆ ಕೇರಳ ಪ್ರವೇಶಿಸಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಹಿಂದೆ ಹವಾಮಾನ ಇಲಾಖೆ ನೀಡಿದ್ದ ಮಾಹಿತಿ ಪ್ರಕಾರ ಜೂನ್ 1ರಂದೇ ಮುಂಗಾರು ಕೇರಳ ಪ್ರವೇಶಿಸಬೇಕಿತ್ತು.
ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ.
ಆದರೆ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಬಿಪರ್ಜಾಯ್ ಚಂಡಮಾರುತ ಕಾರಣದಿಂದ ಮುಂಗಾರು ಮಳೆ ಪ್ರವೇಶ ವಿಳಂಬವಾಗಿತ್ತು.
ಕೇರಳ ಮಾತ್ರವಲ್ಲದೇ ಕರ್ನಾಟಕ ಮತ್ತು ತಮಿಳುನಾಡು, ಈಶಾನ್ಯ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ADVERTISEMENT