ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬ ಕೂಗು ಕರ್ನಾಟಕ ಕಾಂಗ್ರೆಸ್ ನಲ್ಲಿ ಬಲವಾಗುತ್ತಿದೆ.
ತುಮಕೂರಲ್ಲಿ ಕುರುಬ ಸಮುದಾಯದ ಬೃಹತ್ ಸಮಾವೇಶದಲ್ಲಿ ಮಾತಾಡಿದ ಹೆಬ್ಬಾಳ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್,
ಸಿದ್ದರಾಮಯ್ಯ ಅವರಿಗೆ ಮತ್ತೆ ಮುಖ್ಯಮಂತ್ರಿ ಆಗುವ ಆಸೆ ಇಲ್ಲ, ಆದರೆ ನಮ್ಮ ಜನರಿಗೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವ ಅವಶ್ಯಕತೆ ಇದೆ
ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಇಡೀ ಕರ್ನಾಟಕದ ಎಲ್ಲಾ ಜಾತಿಗಳ ನಾಯಕರು. ಮುಂದೆ ತುಮಕೂರಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಅಹಿಂದ ಸಮಾವೇಶ ಮಾಡುತ್ತೇವೆ
ಎಂದು ಹೇಳಿದ್ದಾರೆ.
ಈ ಹಿಂದೆ ಮಾಜಿ ಸಚಿವ ಜಮೀರ್ ಅಹ್ಮದ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಕೂಡಾ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದಿದ್ದರು.
ಇಡೀ ದೇಶಕ್ಕೆ ಸಿದ್ದರಾಮಯ್ಯ ನಾಯಕತ್ವ ಬೇಕು:
ಸಿದ್ದರಾಮಯ್ಯ ಕುರುಬ ಸಮಾಜದ ಕರ್ನಾಟಕ ಕಂಡಂತಹ ಒಬ್ಬ ಯಶಸ್ವಿ ರಾಜಕಾರಣಿ. ಈ ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಒಂದು ಸಂದೇಶ ಹೋಗಿದೆ. ಸಿದ್ದರಾಮಯ್ಯನವರು ಐದು ವರ್ಷಗಳ ಕಾಲ ಎಲ್ಲ ಜಾತಿ ವರ್ಗದವರಿಗೂ ಕಾರ್ಯಕ್ರಮ ನೀಡಿದ್ದಾರೆ. ಈ ಹಿಂದಿನ ಯಾವ ಮುಖ್ಯಮಂತ್ರಿಯೂ ಅಂತಹ ಕಾರ್ಯಕ್ರಮ ನೀಡಿಲ್ಲ. ಆ ಮನುಷ್ಯನ (ಸಿದ್ದರಾಮಯ್ಯರ) ಹೃದಯದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಬೇಕು ಇತ್ತು
ಎಂದು ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಟಿ ಬಿ ಜಯಚಂದ್ರ ಹಾಡಿಹೊಗಳಿದ್ದಾರೆ.