ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಪೋಕ್ಸೊ ಕಾಯ್ದೆಯಡಿ (Pocso Act) ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ( Murugha Matt Shivamorthy Shree) ಜೈಲಿನಿಂದಲೇ ಬ್ಯಾಂಕ್ ಖಾತೆಯ ಚೆಕ್ಗಳಿಗೆ ಸಹಿ ಮಾಡಲು ಅವಕಾಶ ನೀಡಬೇಕು ಎಂಬ ಕೋರಿಕೆಗೆ ಹೈಕೋರ್ಟ್ ಷರತ್ತು ಬದ್ಧ ತಾತ್ಕಾಲಿಕ ಅನುಮತಿ ನೀಡಿದೆ.
ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ವಿಲೇವಾರಿ ಮಾಡಿದೆ.
ಇದನ್ನೂ ಓದಿ : ಮುರುಘಾ ಶ್ರೀಗೆ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ : ವೈದ್ಯರ ವರದಿ ಕೇಳಿದ ಕೋರ್ಟ್
ಸ್ವಾಮೀಜಿಗಳ ಪರ ವಾದ ಮಂಡಿಸಿದ್ದ ವಕೀಲೆ ಸ್ವಾಮಿನಿ ಗಣೇಶ್ ಮೋಹನಂಬಾಳ್ ಅವರು, ಶರಣರು ಯಾವೆಲ್ಲಾ ಚೆಕ್ ಗಳಿಗೆ ಸಹಿ ಮಾಡುತ್ತಾರೆ ಎಂಬ ಪರಿಷ್ಕೃತ ದಾಖಲೆಗಳನ್ನು ನ್ಯಾಯಪೀಠಕ್ಕೆ ಮಂಡಿಸಿದರು. ಅಂತೆಯೇ ಶರಣರ ( Murugha Matt Shivamorthy Shree) ಪರವಾದ ಮತ್ತೊಬ್ಬ ವಕೀಲ ಸಂದೀಪ್ ಒಂದು ಬಾರಿಗೆ ಮಾತ್ರವೇ ಚೆಕ್ ಗಳಿಗೆ ಸಹಿ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ನಂತರ ನ್ಯಾಯಾಲಯ, ಯಾವುದೇ ಕಾರಣಕ್ಕೂ ನೌಕರರು ಸಂಬಳವಿಲ್ಲದೆ ಬಳಲಬಾರದು. ಇದು ಕೋರ್ಟ ನ ಕಾಳಜಿ. ಆದ್ದರಿಂದ, ತಾತ್ಕಾಲಿಕವಾಗಿ ಈ ಅನುಮತಿ ನೀಡಲಾಗುತ್ತಿದೆ. ಅರ್ಜಿದಾರರು ಅಕ್ಟೋಬರ್, 3, 6 ಮತ್ತು 10ರಂದು ಮೂರು ದಿನಗಳ ಕಾಲ ಚೆಕ್ಗಳಿಗೆ ಸಹಿ ಮಾಡಲು ಅವಕಾಶ ನೀಡಿದೆ. ಅಲ್ಲದೇ, ಅರ್ಜಿದಾರರು ಸಹಿ ಮಾಡಿದ ಚೆಕ್ ಗಳ ವಿವರವನ್ನು ತನಿಖಾಧಿಕಾರಿಗಳಿಗೆ ನೀಡಬೇಕು ಎಂದು ಸೂಚನೆ ನೀಡಿ ಆದೇಶಿಸಿದೆ.
ಇದನ್ನೂ ಓದಿ : ಮುರುಘಾ ಶ್ರೀಗಳ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತ – ನ್ಯಾಯಾಂಗ ಬಂಧನ ವಿಸ್ತರಣೆ