ಇಂಡಿಯನ್ ಪ್ರೀಮಿಯರ್ ಲೀಗ್(IPL) ನ ಚೈನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಸ್ಥಾನಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ.
2022 ರ TATA IPL ಇದೇ ಮಾರ್ಚ್ 26 ರಿಂದ ಆರಂಭವಾಗಲಿದೆ. 40 ವರ್ಷದ ಧೋನಿಯ ಆಟಗಾರನಾಗಿ ತಂಡದಲ್ಲಿ ಮುಂದುವರೆಯಲಿದ್ದಾರೆ. 2012 ರಿಂದಲೂ ನಾಯಕತ್ವ ಸ್ಥಾನ ವಹಿಸಿದ್ದ ಇವರು ಇದೀಗ ರಾಜೀನಾಮೆ ನೀಡಿದ್ದಾರೆ. ಆಲ್ರೌಂಡರ್ ರವೀಂದ್ರ ಜಡೇಜಾಗೆ CSK ನಾಯಕತ್ವದ ಜವಾಬ್ದಾರಿ ವಹಿಸಿದ್ದಾರೆ.
ಮಹೇಂದ್ರ ಸಿಂಗ್ ಧೋನಿಯವರು 2019 ರಲ್ಲಿ ಅಂತರಾಷ್ಟ್ರೀಯ ಕ್ರಿಕೇಟ್ ಗೆ ನಿವೃತ್ತಿ ಘೋಷಿಸಿದ್ದರು.