ಕಾಂಗ್ರೆಸ್ಗೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ.
ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಕೆಲಸ ಮಾಡಿದ್ದ ತಮಗೆ ಟಿಕೆಟ್ ನೀಡಿಲ್ಲ ಎಂದು ಬೇಸರದಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ.
೧೯೯೧ರಲ್ಲಿ ಜನತಾ ದಳ ತೊರೆದ ಇವರು ಆ ಬಳಿಕ ಬಿಜೆಪಿ ಸೇರಿದ್ದರು. ೧೯೯೮ ಮತ್ತು ೨೦೦೪ರಲ್ಲಿ ಇವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಲಾಯಿತು.
೨೦೧೩ರಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದ ಇವರು ೨೦೦೮ರಿಂದ ೨೦೧೪ರವರೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.